ADVERTISEMENT

ಮಾಹಿತಿ ಹಕ್ಕು ಆಯೋಗಕ್ಕೆ ಅಧ್ಯಕ್ಷರ ನೇಮಕ: ಪರಾಮರ್ಶೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2012, 19:30 IST
Last Updated 11 ಅಕ್ಟೋಬರ್ 2012, 19:30 IST

ನವದೆಹಲಿ (ಐಎಎನ್‌ಎಸ್): ಸೇವೆಯಲ್ಲಿ ಇರುವ ಅಥವಾ ನಿವೃತ್ತಿ ಹೊಂದಿದ ನ್ಯಾಯಮೂರ್ತಿಗಳನ್ನು ಇಲ್ಲವೇ ನ್ಯಾಯಾಂಗ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಕೇಂದ್ರ ಮತ್ತು ರಾಜ್ಯಗಳ ಮಾಹಿತಿ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲು ಅನುಕೂಲವಾಗಲು ಕಾಯ್ದೆಗೆ ತಿದ್ದುಪಡಿ ತರಬೇಕು  ಎಂಬ ತೀರ್ಪನ್ನು ಪರಾಮರ್ಶಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ಮಾಡುವಂತೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಮತ್ತು ಸಂಸತ್ತಿಗೆ ಸೂಚಿಸುವಂತಿಲ್ಲ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.