ADVERTISEMENT

ಮಾಹಿತಿ ಹಕ್ಕು ತಿದ್ದುಪಡಿ ಪ್ರಸ್ತಾವ ವಾಪಸ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2012, 19:30 IST
Last Updated 1 ನವೆಂಬರ್ 2012, 19:30 IST

ನವದೆಹಲಿ: ಸಾಮಾಜಿಕ ಮತ್ತು ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದ ಕಡತಗಳ ಮೇಲಿನ ಟಿಪ್ಟಣಿಗಳನ್ನು ಮಾತ್ರ ಬಹಿರಂಗಗೊಳಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ತರುವ ವಿವಾದಾತ್ಮಕ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಕಡೆಗೂ ವಾಪಸ್ ಪಡೆದಿದೆ.

ಪ್ರಧಾನಿ ಮನಮೋಹನ್ ಸಿಂಗ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮಾಹಿತಿ ಹಕ್ಕು ಕಾರ್ಯಕರ್ತರು ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಈ ವಿವಾದಾತ್ಮಕ ಪ್ರಸ್ತಾವಕ್ಕೆ ವಿರೋಧ ವ್ಯಕ್ತವಾಗಿತ್ತು.

ಹೀಗಾಗಿ ಜನರು, ಸರ್ಕಾರಿ ಇಲಾಖೆಗಳಿಂದ ಬಹುಪಾಲು ವಿಷಯಗಳಿಗೆ ಸಂಬಂಧಿಸಿದಂತೆ ಕಡತದಲ್ಲಿನ ಟಿಪ್ಪಣಿಗಳನ್ನು ಬಹಿರಂಗಪಡಿಸಲು ಕೋರಬಹುದು.

ರಾಷ್ಟ್ರೀಯ ಭದ್ರತೆ, ಖಾಸಗಿತನ ಹಾಗೂ ವಾಣಿಜ್ಯ ಹಿತಾಸಕ್ತಿಯ ವಿಷಯಗಳ ಮಾಹಿತಿ ಕೋರಿಕೆಯನ್ನು ತಿರಸ್ಕರಿಸಲು ಅವಕಾಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.