ADVERTISEMENT

ಮೀಸಲಾತಿ ನೀತಿ ಬದಲಾಯಿಸಲು ಅವಕಾಶ ಕೊಡೆವು: ಶಾ

ಪಿಟಿಐ
Published 4 ಏಪ್ರಿಲ್ 2018, 19:30 IST
Last Updated 4 ಏಪ್ರಿಲ್ 2018, 19:30 IST
ಮೀಸಲಾತಿ ನೀತಿ ಬದಲಾಯಿಸಲು ಅವಕಾಶ ಕೊಡೆವು: ಶಾ
ಮೀಸಲಾತಿ ನೀತಿ ಬದಲಾಯಿಸಲು ಅವಕಾಶ ಕೊಡೆವು: ಶಾ   

ಭವಾನಿಪಟ್ಟಣ (ಒಡಿಶಾ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ನೀತಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸುವ ಪ್ರಶ್ನೆಯೇ ಇಲ್ಲ. ಅಷ್ಟೇ ಅಲ್ಲ, ಬೇರೆ ಯಾರೂ ಅದನ್ನು ರದ್ದು ಮಾಡಲು ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ‍ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿ ದೇಶದಾದ್ಯಂತ ನಡೆದ ಪ್ರತಿಭಟನೆಯಲ್ಲಿ ಜನರು ಬಲಿಯಾಗಲು ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳೇ ಕಾರಣ ಎಂದು ಶಾ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT