ADVERTISEMENT

ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್‌ ಕುಮಾರ್‌ ಜ್ಯೋತಿ

ಪಿಟಿಐ
Published 4 ಜುಲೈ 2017, 12:54 IST
Last Updated 4 ಜುಲೈ 2017, 12:54 IST
ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್‌ ಕುಮಾರ್‌ ಜ್ಯೋತಿ
ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್‌ ಕುಮಾರ್‌ ಜ್ಯೋತಿ   

ನವದೆಹಲಿ: ಪ್ರಸ್ತುತ ಚುನಾವಣಾ ಆಯುಕ್ತರಾಗಿರುವ ಅಚಲ್‌ ಕುಮಾರ್‌ ಜ್ಯೋತಿ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಚುನಾವಣಾ ಆಯೋಗ ಮಂಗಳವಾರ ನೇಮಕ ಮಾಡಿದೆ.

ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರು ಇದೇ ಜುಲೈ 6ರಂದು ನಿವೃತ್ತರಾಗುವರು. ಅಂದು 64 ವರ್ಷ ವಯಸ್ಸಿನ ಅಚಲ್‌ ಕುಮಾರ್‌ ಜ್ಯೋತಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

1975ರ ಬ್ಯಾಚ್‌ನ ಗುಜರಾತ್‌ ಕೇಡರ್‌ನ ಭಾರತೀಯ ಆಡಳಿತಾತ್ಮಕ ಸೇವೆ(ಐಎಎಸ್) ಅಧಿಕಾರಿಯಾಗಿದ್ದ ಅಚಲ್‌ ಕುಮಾರ್‌ ಅವರು ಗುಜರಾತ್‌ನ ವಿಚಕ್ಷಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್‌ನ ಮುಖ್ಯ ಕಾರ್ಯದರ್ಶಿಯಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.