ಹೈದರಾಬಾದ್, (ಪಿಟಿಐ): ಅಕ್ರಮ ಆಸ್ತಿ ಪ್ರಕರಣದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿರುವ ಕಡಪ ಸಂಸದ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ ಅವರ ಬಂಧನದ ಅವಧಿಯನ್ನು ಸ್ಥಳೀಯ ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 4ರವರೆಗೆ ವಿಸ್ತರಿಸಿದೆ.
ಇಲ್ಲಿನ ಚಂಚಲಗೂಡ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜಗನ್ ಅವರನ್ನು ಸಿಬಿಐ ನ್ಯಾಯಾಲಯದ ನ್ಯಾಯಾಧೀಶರು ವಿಡಿಯೋ ಕಾನ್ಫರೇನ್ಸ್ ಮೂಲಕ ವಿಚಾರಣೆ ನಡೆಸಿ, ಬಂಧನದ ಅವಧಿಯನ್ನು ವಿಸ್ತರಿಸಿದರು.
ಈ ಹಿಂದೆ ಜಗನ್ ಅವರು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗುವುದಾಗಿ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ವಿಡಿಯೋ ಕಾನ್ಫರೇನ್ಸ್ ಮೂಲಕವೇ ವಿಚಾರಣೆ ನಡೆಸಲು ವ್ಯವಸ್ಥೆ ಕಲ್ಪಿಸುವಂತೆ ಕಾರಾಗೃಹದ ಪ್ರಾಧಿಕಾರಕ್ಕೆ ನಿರ್ದೇಶಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.