ADVERTISEMENT

ಮುಂಬೈ ಉಗ್ರರ ದಾಳಿ: 12 ವರ್ಷದಲ್ಲಿ 458 ಸಾವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2012, 19:30 IST
Last Updated 26 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಮುಂಬೈ ಮೇಲೆ ಕಳೆದ 12 ವರ್ಷಗಳಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 458 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ಸಭೆಗೆ ಗುರುವಾರ ಮಾಹಿತಿ ನೀಡಲಾಯಿತು.ಗೃಹ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದರು.

26/11 ರಂದು ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್-ಎ-ತೊಯ್ಬಾದ ಡೇವಿಡ್ ಹೆಡ್ಲಿ, ಪಾಕಿಸ್ತಾನದ ಇಬ್ಬರು ಅಧಿಕಾರಿಗಳು ಸೇರಿದಂತೆ ಒಂಬತ್ತು ಜನರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಪಟ್ಟಿ ದಾಖಲಿಸಿದೆ ಎಂದು ಅವರು ಇದೇ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.