ADVERTISEMENT

ಮುಂಬೈ ದಾಳಿ: ಪಾಕ್‌ಗೆ ದಾಖಲೆ ರವಾನೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಕಳೆದ ತಿಂಗಳು ಪಾಕಿಸ್ತಾನದ ನ್ಯಾಯಾಂಗ ಆಯೋಗವು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾಲ್ವರು ಸಾಕ್ಷಿಗಳು ಡೃಢಪಡಿಸಿರುವ ಅಂಶಗಳನ್ನು ಒಳಗೊಂಡ ಸಮಗ್ರ ದಾಖಲೆಗಳನ್ನು ಶೀಘ್ರದಲ್ಲಿಯೇ ಪಾಕಿಸ್ತಾನಕ್ಕೆ ಕಳುಹಿಸಲಾಗುತ್ತಿದೆ.

ಸುಮಾರು 700 ಪುಟಗಳ ಈ ದಾಖಲೆಯು ಕಸಾಬ್‌ನ ಹೇಳಿಕೆ, ದಾಳಿ ಸಂದರ್ಭದಲ್ಲಿ ಹತ್ಯೆಗೊಳಗಾದ ಭಯೋತ್ಪಾದಕರ ಮರಣೋತ್ತರ ಪರೀಕ್ಷಾ ವರದಿ ಮತ್ತು ಪ್ರಕರಣದ ಡೈರಿ ಮೊದಲಾದವುಗಳನ್ನು ಒಳಗೊಂಡಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.