ನವದೆಹಲಿ (ಐಎನ್‌ಎಸ್): ಮುಂಬೈನಲ್ಲಿ 1993ರಲ್ಲಿ ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದ ಮೇಲೆ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ವಿಧಿಸಿರುವ 6 ವರ್ಷ ಜೈಲು ಶಿಕ್ಷೆಯನ್ನು ಮುಂದುವರಿ ಸಬೇಕೆಂದು ಸಿಬಿಐ ಗುರುವಾರ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿಕೊಂಡಿದೆ.
`ದತ್ ತಮ್ಮ ಬಳಿ ಇದ್ದ ರೈಫಲ್‌ನ್ನು ಮುರಿದು ಹಾಕಿ ಸಾಕ್ಷ್ಯ ನಾಶ ಮಾಡಿದ್ದರು~ ಎಂದು ನ್ಯಾಯಮೂರ್ತಿಗಳಾದ ಪಿ. ಸದಾಶಿವಂ ಹಾಗೂ ಬಿ.ಎಸ್.ಚವಾಣ್ ಅವರನ್ನು ಒಳಗೊಂಡ ಪೀಠಕ್ಕೆ ಸಿಬಿಐ ತಿಳಿಸಿತು.ದತ್ ಈಗಾಗಲೇ ಒಂದೂವರೆ ವರ್ಷ ಶಿಕ್ಷೆ ಪೂರ್ಣಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.