
ಪ್ರಜಾವಾಣಿ ವಾರ್ತೆಕೋಲ್ಕತ್ತ (ಪಿಟಿಐ): ಆಂತರಿಕ ಭದ್ರತೆ ಕುರಿತು ದೆಹಲಿಯಲ್ಲಿ ಸೋಮವಾರ ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ ಎಂದು ಉನ್ನತ ಮೂಲಗಳು ಭಾನುವಾರ ತಿಳಿಸಿವೆ.
ಆದರೆ ಮಮತಾ ಬದಲು ಹಣಕಾಸು ಸಚಿವ ಅಮಿತ್ ಮಿತ್ರಾ ಪಾಲ್ಗೊಳ್ಳುವರು. ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮಿತಿ (ಎನ್‌ಸಿಟಿಸಿ) ರಚನೆಗೆ ಸಂಬಂಧಿಸಿದಂತೆ ಮೇ 5ರಂದು ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಮಮತಾ ಭಾಗವಹಿಸುವರು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.