ADVERTISEMENT

ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣ ವಚನ ಸ್ವೀಕಾರ

2 ನೇ ಅವಧಿಗೆ ತಮಿಳುನಾಡಿನ

​ಪ್ರಜಾವಾಣಿ ವಾರ್ತೆ
Published 23 ಮೇ 2016, 10:48 IST
Last Updated 23 ಮೇ 2016, 10:48 IST
ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣ ವಚನ ಸ್ವೀಕಾರ
ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣ ವಚನ ಸ್ವೀಕಾರ   

ಚೆನ್ನೈ: ಇಲ್ಲಿನ ಮದ್ರಾಸ್ ವಿವಿಯ ಸೆನೆಟರಿ ಆಡಿಟೋರಿಯಂನಲ್ಲಿ ಸತತವಾಗಿ ಎರಡನೆ ಅವಧಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೆ. ಜಯಲಲಿತಾ ಅವರು  ಪ್ರಮಾಣ ವಚನ ಸ್ವೀಕರಿಸಿದರು.

ತಮಿಳುನಾಡಿನ ರಾಜ್ಯಪಾಲ ಕೆ. ರೋಸಯ್ಯ ಅವರು ಜಯಲಲಿತಾ ಅವರಿಗೆ ಪ್ರಮಾಣವಚನವನ್ನು ಬೋಧಿಸಿದರು. ಜಯಲಲಿತಾ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ಜೆ. ಜಯಲಲಿತಾ ಅವರ ಜೊತೆ 28 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ADVERTISEMENT

ಸಮಾರಂಭದಲ್ಲಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಡಿಎಂಕೆ ಮುಖಂಡ ಸ್ಟಾಲಿನ್, ಶಶಿಕಲಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.