ADVERTISEMENT

ಮುಖ್ಯಮಂತ್ರಿ ಬದಲು: ವರದಿಗೆ ಗಡ್ಕರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ನವದೆಹಲಿ: ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಅಧ್ಯಯನ ಮಾಡಿ ಎರಡು ವಾರದೊಳಗೆ ವರದಿ ಸಲ್ಲಿಸುವಂತೆ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಜಯ್ ಜೋಷಿ ಅವರಿಗೆ ಸೂಚನೆ ನೀಡಿದ್ದಾರೆ.

ಅಧಿಕಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ನಡುವೆ ನಡೆದಿರುವ ಹಣಾಹಣಿ ಪಕ್ಷದ ಹೈಕಮಾಂಡ್ ಅನ್ನು ಇಕ್ಕಟ್ಟಿಗೆ ಸಿಕ್ಕಿಸಿರುವ ಹಿನ್ನೆಲೆಯಲ್ಲಿ ಸಂಜಯ್ ಜೋಷಿ ಅವರಿಗೆ ವರದಿ ಸಲ್ಲಿಸುವಂತೆ ಹೇಳಲಾಗಿದೆ.

ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಪಕ್ಷದ ವಿವಿಧ ಮುಖಂಡರ ಜೊತೆ ಚರ್ಚಿಸಲು ಜೋಷಿ ಸದ್ಯದಲ್ಲೇ ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ದೆಹಲಿಗೆ ಬೇರೆ ಬೇರೆ ತಂಡಗಳಲ್ಲಿ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಮುಖಂಡರು ಇವರನ್ನು ಭೇಟಿ ಮಾಡಿ ಚರ್ಚಿಸುತ್ತಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಅಗತ್ಯವೇ ? ಪಕ್ಷಕ್ಕೆ ಯಡಿಯೂರಪ್ಪ ಅನಿವಾರ್ಯವೇ ಎಂಬ ಬಗ್ಗೆ ಜೋಷಿ ವರದಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.