ADVERTISEMENT

ಮುನ್ನೋಟ 2023: ಜಯಾ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ಚೆನ್ನೈ (ಪಿಟಿಐ):  `ಮುನ್ನೋಟ 2023~ನ್ನು ತಮ್ಮ ಕನಸಿನ ಯೋಜನೆ ಎಂದು ಕರೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ, ರಾಜ್ಯದ ಜನರ ಪಾಲಿಗೆ ಇದೊಂದು ಯಶಸ್ವಿ ಯೋಜನೆಯಾಗುತ್ತದೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಬುಧವಾರ ಸ್ವಯಂ ಪ್ರೇರಿತರಾಗಿ ಹೇಳಿಕೆ ನೀಡಿದ ಜಯಾ, `ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ತರುವುದಕ್ಕಾಗಿ  ಮತ್ತು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾಗಿರುವ ಅವಶ್ಯಕ ಮೂಲಸೌಕರ್ಯಗಳ  ಸುಧಾರಣೆಗಾಗಿ `ಮುನ್ನೋಟ 2023~ ಯೋಜನೆ ರೂಪಿಸಲಾಗಿದೆ~ ಎಂದು ಹೇಳಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.