ಲಖನೌ (ಪಿಟಿಐ): ರಾಜ್ಯದಲ್ಲಿ ತಮ್ಮ ಪಕ್ಷ ಬಹುಮತ ಗಳಿಸಲಿದ್ದು ಪಕ್ಷದ ಮುಖಂಡ ಮುಲಾಯಂ ಸಿಂಗ್
ಉ.ಪ್ರದೇಶ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಬಿಎಸ್‌ಪಿ ಮುಖ್ಯಮಂತ್ರಿ ಮಾಯಾವತಿ ನೇತೃತ್ವದ ಸಚಿವ ಸಂಪುಟ ಸಭೆ ಭಾನುವಾರ ತಡರಾತ್ರಿ ಉತ್ತರ ಪ್ರದೇಶ ವಿಧಾನಸಭೆಯನ್ನು ವಿಸರ್ಜಿಸುವ ನಿರ್ಣಯ ಅಂಗೀಕರಿಸಿ, ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. |
ಯಾದವ್ ಅವರು ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಕ್ಷಧ್ಯ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
`ರಾಜ್ಯದಲ್ಲಿ ಪಕ್ಷ ಆಧಿಕಾರಕ್ಕೆ ಬರಲು ಕಠಿಣ ಶ್ರಮ ವಹಿಸಿದ್ದು, ಖಂಡಿತವಾಗಿ ಬಹುಮತ ಗಳಿಸುತ್ತೇವೆ~ ಎಂದು ಸುದ್ದಿಗಾರರಿಗೆ ಅವರು ಹೇಳಿದರು.
`ಪಕ್ಷದಿಂದ ಆರಿಸಿ ಬಂದ ಶಾಸಕರು ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಾರೆ~ ಎಂದು ನುಡಿದರು.
ರಾಜ್ಯದಲ್ಲಿ ಬಿಎಸ್‌ಪಿ ಜತೆ ಕಾಂಗ್ರೆಸ್ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಕಾಂಗ್ರೆಸ್ ಮುಖಂಡ ಬೇಣಿ ಪ್ರಸಾದ್ ವರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಖಿಲೇಶ್, `ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರ ಪಕ್ಷ ಅದನ್ನು ನಿರ್ಧರಿಸಲಿದೆ~ ಎಂದರು.
ಉತ್ತರ ಪ್ರದೇಶದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂಬ ಮತಗಟ್ಟೆ ಸಮೀಕ್ಷೆ ಹಿನ್ನೆಲೆಯಲ್ಲಿ ವರ್ಮಾ ಈ ಹೇಳಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.