ADVERTISEMENT

ಮೂರು ವರ್ಷಗಳಲ್ಲಿ 129 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2012, 10:35 IST
Last Updated 23 ಆಗಸ್ಟ್ 2012, 10:35 IST

ನವದೆಹಲಿ (ಪಿಟಿಐ): ನೀವು ನಂಬುತ್ತೀರೋ ಇಲ್ವೊ! ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 129ಕ್ಕೂ ಅಧಿಕ ಜಂಟಿ ಕಾರ್ಯದರ್ಶಿ ಶ್ರೇಣಿಯ  ಹಿರಿಯ ಅಧಿಕಾರಿಗಳ ಮೇಲೆ ಸಿಬಿಐ ಅಧಿಕಾರಿಗಳ ತಂಡ ಭ್ರಷ್ಟಾಚಾರ ಪ್ರಕರಣಗಳನ್ನು ದಾಖಲಿಸಿದೆ.

ಇದರಲ್ಲಿ ಈಗಾಗಲೇ 97 ಹಿರಿಯ ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ಪ್ರಕರಣಗಳನ್ನು  ನೊಂದಾಯಿಸಲಾಗಿದೆ. 97 ಪ್ರಕರಣಗಳಲ್ಲಿ 71 ಸಾಮಾನ್ಯ ಪ್ರಕರಣಗಳಾಗಿದ್ದು, ಇನ್ನು 26 ಪ್ರಕರಣಗಳ ತನಿಖೆಯು ಪ್ರಾಥಮಿಕ ಹಂತದಲ್ಲಿವೆ ಎಂದು ಸಿಬ್ಬಂದಿ, ಸಾರ್ವಜನಿಕ ಕೊಂದು ಕೊರತೆ ಹಾಗೂ ಪಿಂಚಣಿ ಇಲಾಖೆಯ ರಾಜ್ಯ ಸಚಿವ ವಿ. ನಾರಾಯಣಸ್ವಾಮಿ ಅವರು ಗುರುವಾರ ರಾಜ್ಯಸಭೆಯಲ್ಲಿ ಎತ್ತಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈಗಾಗಲೇ 129 ಹಿರಿಯ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 15 ಅಧಿಕಾರಿಗಳು ಒಂದಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.