ADVERTISEMENT

ಮೆಹಬೂಬ ರಾಜನಾಥ್ ಚರ್ಚೆ

ಪಿಟಿಐ
Published 11 ಏಪ್ರಿಲ್ 2018, 20:28 IST
Last Updated 11 ಏಪ್ರಿಲ್ 2018, 20:28 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬುಧವಾರ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

‘ಕಾಶ್ಮೀರ ಕಣಿವೆಯಲ್ಲಿ ಶಾಂತಿ ಪುನರ್ ಸ್ಥಾಪಿಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ರಾಜನಾಥ ಸಿಂಗ್ ಅವರಿಗೆ ಮೆಹಬೂಬಾ ವಿವ
ರಣೆ ನೀಡಿದರು’ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

‘ಪಾಕಿಸ್ತಾನದ ಗಡಿಯಲ್ಲಿ ಉಗ್ರರು ಒಳನುಸುಳಲು ಮಾಡುತ್ತಿರುವ ಪ್ರಯತ್ನ, ಪ್ರತಿನಿತ್ಯ ನಡೆಯುತ್ತಿರುವ ಗುಂಡಿನ ದಾಳಿ ಬಗ್ಗೆಯೂ ಚರ್ಚೆ ನಡೆಯಿತು’ ಎಂದು ಅವರು ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.