ADVERTISEMENT

ಮೋದಿ ಬಗ್ಗೆ ಸರಿಯಾದ ಉತ್ತರ ನೀಡದ ಕಾರ್ಮಿಕನ ಮೇಲೆ ಹಲ್ಲೆ

ಪಿಟಿಐ
Published 25 ಮೇ 2018, 19:30 IST
Last Updated 25 ಮೇ 2018, 19:30 IST

ಮಾಲ್ಡಾ, ಪಶ್ಚಿಮ ಬಂಗಾಳ: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಗೀತೆ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಲು ವಿಫಲವಾದ ಕಾರಣಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನ ಮೇಲೆ ನಾಲ್ವರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹೌರಾದಿಂದ ಮಾಲ್ಡಾ ಜಿಲ್ಲೆಯ ಕಾಲಿ‌ಯಾಚಕ್‌ಗೆ ಇದೇ 14ರಂದು ವಲಸೆ ಕಾರ್ಮಿಕರೊಬ್ಬರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ರೈಲು ಹತ್ತಿದ ನಾಲ್ವರು ಅವರ ಎದುರಿನ ಸೀಟಿನಲ್ಲಿ ಕುಳಿತಿದ್ದರು. ಇದ್ದಕ್ಕಿದ್ದಂತೆ ಪ್ರಧಾನಿ ಮೋದಿ, ರಾಷ್ಟ್ರಗೀತೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಕಾರ್ಮಿಕನಿಗೆ ಪ್ರಶ್ನೆ ಕೇಳಲಾರಂಭಿಸಿದರು. ಸರಿಯಾದ ಉತ್ತರ ನೀಡಲಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ ನಾಲ್ವರೂ ಬಂದೆಲ್ ನಿಲ್ದಾಣದಲ್ಲಿ ಇಳಿದು ಹೋಗಿದ್ದಾರೆ.

ಘಟನೆಯ ದೃಶ್ಯಗಳನ್ನು ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಅದರ ಆಧಾರದಲ್ಲಿ ಬಂಗಾಳ ಸಂಸ್ಕೃತಿ ಮಂಚ್ ಕಾರ್ಯಕರ್ತರು ಕಾಲಿಯಾಚಕ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಗುರುವಾರ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್‌ ಸುಮನ್ ಚಟರ್ಜಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.