ನವದೆಹಲಿ: ಗುಜರಾತಿನ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣಗಳಲ್ಲಿ ಅಭಿವೃದ್ಧಿಯ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
‘ಸತತ 22 ವರ್ಷಗಳಿಂದ ಗುಜರಾತಿನಲ್ಲಿ ಬಿಜೆಪಿ ಸರ್ಕಾರವಿದೆ. ನಾನು ಒಂದೇ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನರೇಂದ್ರ ಮೋದಿ ಅವರ ಭಾಷಣಗಳಲ್ಲಿ ಅಭಿವೃದ್ಧಿ ಪರ ಮಾತುಗಳು ಕಾಣದಿರಲು ಕಾರಣವೇನು?’ ಎಂದು ರಾಹುಲ್ ಕೇಳಿದ್ದಾರೆ.
ರಾಹುಲ್ ಗಾಂಧಿ ಅವರು ಗುಜರಾತಿನಲ್ಲಿ ಚುನಾವಣೆ ಪ್ರಚಾರ ಆರಂಭವಾದ ದಿನದಿಂದ ಟ್ವಿಟರ್‌ನಲ್ಲಿ ‘22 ವರ್ಷದ ಸಾಧನೆ’ ಎಂಬ ಟ್ಯಾಗ್‌ಲೈನ್ ಮೂಲಕ ಮೋದಿ ಅವರಿಗೆ ಪ್ರಶ್ನೆ ಕೇಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.