ADVERTISEMENT

ಯಡಿಯೂರಪ್ಪ ವಾದ ತಳ್ಳಿಹಾಕಿದ ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 11 ಮೇ 2012, 19:30 IST
Last Updated 11 ಮೇ 2012, 19:30 IST

ನವದೆಹಲಿ: ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ಲೋಕಾಯುಕ್ತ ಪೊಲೀಸರು ಈಗಾಗಲೇ ತಮ್ಮನ್ನು ತನಿಖೆಗೆ ಒಳಪಡಿಸಿದ್ದಾರೆ.

ಹೀಗಾಗಿ ಈಗ ಸಿಬಿಐ ತನಿಖೆನಡೆಸುವ ಅಗತ್ಯವಿಲ್ಲ ಎಂದುಬಿ.ಎಸ್.ಯಡಿಯೂರಪ್ಪ ಪರ  ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿತು.

ಯಡಿಯೂರಪ್ಪ ವಿರುದ್ಧದ ನಿರ್ದಿಷ್ಟ ಆರೋಪಗಳನ್ನು ಉಲ್ಲೇಖಿಸಿ, ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆಸಿದ್ದ  ಅಸಮರ್ಪಕ ಡಿನೋಟಿಫಿಕೇಶನ್ ಪ್ರಕರಣವನ್ನು ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಪರಿಗಣಿಸಲಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ಅವರನ್ನು ಒಳಗೊಂಡ ಪೀಠವು ಹೇಳಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.