ADVERTISEMENT

ಯಾಕೆ ಸುಳ್ಳುಗಳನ್ನು ಹರಡುತ್ತಿದ್ದೀರಿ? ಅಮಿತ್‌ ಶಾಗೆ ನಾಯ್ಡು ಪ್ರಶ್ನೆ

ಏಜೆನ್ಸೀಸ್
Published 24 ಮಾರ್ಚ್ 2018, 17:12 IST
Last Updated 24 ಮಾರ್ಚ್ 2018, 17:12 IST
ಚಂದ್ರಬಾಬು ನಾಯ್ಡು (ಸಂಗ್ರಹ ಚಿತ್ರ)
ಚಂದ್ರಬಾಬು ನಾಯ್ಡು (ಸಂಗ್ರಹ ಚಿತ್ರ)   

ನವದೆಹಲಿ: ಎನ್‌ಡಿಎ ಮೈತ್ರಿಕೂಟದಿಂದ ತೆಲಗು ದೇಶಂ ಪಕ್ಷ (ಟಿಡಿಪಿ) ಹೊರನಡೆದಿರುವ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬರೆದಿರುವ ಪತ್ರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ‘ಯಾಕೆ ಸುಳ್ಳುಗಳನ್ನು ಹರಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.

ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಮಾತನಾಡಿದ ನಾಯ್ಡು, ‘ಅಮಿತ್‌ ಶಾ ಬರೆದಿರುವ ಪತ್ರ ಸಂಪೂರ್ಣ ಸುಳ್ಳು ಮಾಹಿತಿಯಿಂದ ಕೂಡಿದೆ. ಇದು ಅವರ ಮನಸ್ಥಿತಿಯನ್ನು ಸೂಚಿಸುತ್ತದೆ. ಈಗಲೂ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿದೆ. ಅದೇ ರೀತಿಯ ಉತ್ತೇಜನ ನೀಡಿದ್ದರೆ ಅನೇಕ ಕೈಗಾರಿಕೆಗಳು ರಾಜ್ಯಕ್ಕೆ ಬರುತ್ತಿದ್ದವು’ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ನಿರಾಕರಿಸಿದ ಬಳಿಕ ಎನ್‌ಡಿಎ ಮೈತ್ರಿ ಕೂಟದಿಂದ ಹೊರಬರಲು ನಾಯ್ಡು ನಿರ್ಧಸಿದ್ದರು. ಈ ಕುರಿತು ಅಮಿತ್‌ ಶಾ 9 ಪುಟಗಳ ಪತ್ರ ಬರೆದಿದ್ದು, ನಾಯ್ಡು ನಿರ್ಧಾರವನ್ನು ‘ಏಕಪಕ್ಷೀಯ ಮತ್ತು ದುರದೃಷ್ಟಕರ’ ಎಂದು ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಯಾಗಿ ನಾಯ್ಡು, ‘ಆಂಧ್ರಪ್ರದೇಶದ ಜನರ ನಿರೀಕ್ಷೆಗಳಿಗೆ ಬಿಜೆಪಿ ಸ್ಪಂದಿಸುತ್ತಿಲ್ಲ. ಶಾ ಮಾತು ‘ಸುಳ್ಳು ಮತ್ತು ಆಧಾರ ರಹಿತ’ ಎಂದು ಆರೋಪಿಸಿದ್ದಾರೆ.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.