ADVERTISEMENT

ಯಾವುದೇ ಕ್ಷಣ ಅಗ್ನಿವೇಶ್ ಬಂಧನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2011, 19:30 IST
Last Updated 17 ಸೆಪ್ಟೆಂಬರ್ 2011, 19:30 IST

ಚಂಡೀಗಡ : ಅಮರನಾಥ ಯಾತ್ರೆ ಕುರಿತು ವಿವಾದಾಸ್ಪದ ಹೇಳಿಕೆ ನೀಡಿರುವ ಅಣ್ಣಾ ಹಜಾರೆ ತಂಡದ ಸದಸ್ಯ ಸ್ವಾಮಿ ಅಗ್ನಿವೇಶ್‌ರನ್ನು ಪೊಲೀಸರು ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಮರನಾಥ ಯಾತ್ರೆ ಕೃತ್ರಿಮ, ಮೋಸ ಎಂದು ಈ ವರ್ಷದ ಮೇ ತಿಂಗಳಲ್ಲಿ  ಸ್ವಾಮಿ ಅಗ್ನಿವೇಶ್ ಹೇಳಿಕೆ ನೀಡಿದ್ದರು. ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಪ್ರವೀಣ್ ತಯಾಲ್ ಅವರು ಸ್ವಾಮಿ ಅಗ್ನಿವೇಶ್ ವಿರುದ್ಧ ಈ ಹಿಂದೆ ದೂರು ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.