ADVERTISEMENT

ಯುಪಿಎ ವಿರುದ್ಧ ಟಿಎಂಸಿ ಟೀಕಾಸ್ತ್ರ

​ಪ್ರಜಾವಾಣಿ ವಾರ್ತೆ
Published 5 ಜೂನ್ 2012, 19:30 IST
Last Updated 5 ಜೂನ್ 2012, 19:30 IST

ನವದೆಹಲಿ: ಕಲ್ಲಿದ್ದಲು ನಿಕ್ಷೇಪಗಳ ಮಂಜೂರಾತಿಯಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಗಳ ಕೋರಿಕೆಯನ್ನು ತಿರಸ್ಕರಿಸುವ ಜತೆಗೆ ಖಾಸಗಿ ಕಂಪೆನಿಗಳಿಗೆ ಮಣೆ ಹಾಕಿದ ಸರ್ಕಾರದ ಕ್ರಮವನ್ನು ಯುಪಿಎ ಮಿತ್ರಪಕ್ಷವಾದ ತೃಣಮೂಲ ಕಾಂಗ್ರೆಸ್ ಕಟುವಾಗಿ (ಟಿಎಂಸಿ) ಟೀಕಿಸಿದೆ.

ಕಾಂಗ್ರೆಸ್ ಪಕ್ಷವು ಈ ಸಂಬಂಧದ ಆರೋಪಗಳನ್ನು ಅಲ್ಲಗಳೆದು, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸಮರ್ಥಿಸಿಕೊಂಡ ಮರುದಿನವೇ ಟಿಎಂಸಿ ಟೀಕಾಸ್ತ್ರವನ್ನು ಪ್ರಯೋಗಿಸಿದೆ.

ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ನಿಯಮಿತ ಮತ್ತು ಭಾರತೀಯ ಉಕ್ಕು ಪ್ರಾಧಿಕಾರಗಳು ಕಲ್ಲಿದ್ದಲು ನಿಕ್ಷೇಪಗಳ ಮಂಜೂರಾತಿ ಕೋರಿದ್ದವು.

ಆದರೂ ಸರ್ಕಾರ ನಿಕ್ಷೇಪಗಳನ್ನು ಖಾಸಗಿ ಕಂಪನಿಗಳಿಗೆ ಮಂಜೂರು ಮಾಡಿತ್ತು ಎಂದು ಟಿಎಂಸಿ ಸಂಸದರೂ ಆದ ಸಂಸದೀಯ ಸಮಿತಿಯ ಮುಖ್ಯಸ್ಥ ಕಲ್ಯಾಣ್ ಬ್ಯಾನರ್ಜಿ ಅವರು ಖಾಸಗಿ ವಾಹಿನಿಯೊಂದರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.