ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಏರ್ಪಡಿಸಿದ್ದ ಇಫ್ತಾರ್ ಕೂಟ ವಿರೋಧಿಸಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆ ಸೇನೆ ಗುಂಡು ಹಾರಿಸಿದ್ದು, ಇಬ್ಬರು ಸಹೋದರಿಯರು ಸೇರಿ ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೋಪಿಯಾನ್‌ನ ಡಿ.ಕೆ.ಪೊರಾ ಪ್ರದೇಶದಲ್ಲಿ ಸೋಮವಾರ ಸಂಜೆ ಈ ಪ್ರಕರಣ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಲ್ಲಿನ ಮಸೀದಿ ಬಳಿ ಬೀಡು ಬಿಟ್ಟಿರುವ 34ನೇ ರಾಷ್ಟ್ರೀಯ ರೈಫಲ್ಸ್ ಪಡೆ ಸ್ಥಳೀಯರಿಗೆ ರಂಜಾನ್ ಪ್ರಯುಕ್ತ ಇಫ್ತಾರ್ ಕೂಟ ಆಯೋಜಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.