
ಪ್ರಜಾವಾಣಿ ವಾರ್ತೆಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಸುಂದರ್‌ಬನಿ ವಲಯದ ಮೇಲೆ ಪಾಕಿಸ್ತಾನದ ಸೈನಿಕರು ಏ.17ರಂದು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಯೋಧ ಚರಣ್‌ಜೀತ್ ಸಿಂಗ್ (42) ಸೇನಾ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಸಿಂಗ್ ಅವರು ರಜೌರಿ ಜಿಲ್ಲೆಯ ನೌಶೇರಾ ಪ್ರದೇಶದ ಕಲ್ಸಿಯಾನ್ ಗ್ರಾಮದವರು. ಪಾಕಿಸ್ತಾನವು ಪ್ರಸಕ್ತ ವರ್ಷದಲ್ಲಿ 650ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.