ADVERTISEMENT

ರಾಜಕಾರಣಿಗಳಿಗೆ ನಿವೃತ್ತಿ ಬೇಡ: ಎಸ್.ವೈ.ಖುರೇಷಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2012, 19:30 IST
Last Updated 6 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಜನಪ್ರತಿನಿಧಿಗಳನ್ನು ವಾಪಸು ಕರೆಯಿಸುವ ಹಕ್ಕು ಮತ್ತು ರಾಜಕಾರಣಿಗಳಿಗೆ ನಿವೃತ್ತಿ ವಯಸ್ಸು ನಿಗದಿಪಡಿಸುವುದು ಕಾರ್ಯಸಾಧು ಕ್ರಮಗಳಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಅವರು ತಿಳಿಸಿದರು.

ರಾಜಕೀಯ ಪಕ್ಷಗಳ ಲೆಕ್ಕಪತ್ರಗಳನ್ನು ಲೆಕ್ಕ ಪರಿಶೋಧನೆಗೆ ಒಳಪಡಿಸುವುದು ಮತ್ತು ವಂತಿಗೆ ಸಂಗ್ರಹದ ಮೇಲೆ ನಿಗಾ ಇಡುವಂತಹ ಚುನಾವಣಾ ಸುಧಾರಣಾ ಕ್ರಮಗಳನ್ನು ಜಾರಿಗೆ ತರುವುದು ಒಳಿತು ಎಂದು ಅವರು ಅಭಿಪ್ರಾಯಪಟ್ಟರು.

ರಾಜಕೀಯ ಅಪರಾಧೀಕರಣ ಮತ್ತು ಕಪ್ಪುಹಣ ಪ್ರಜಾಪ್ರಭುತ್ವಕ್ಕೆ ದೊಡ್ಡ ಸವಾಲುಗಳು ಎಂದರು.
 ಈ ಸಮಸ್ಯೆಯಿಂದಾಗಿ ಭಾರತದ ಪ್ರಜಾಪ್ರಭುತ್ವ ಮಹಾನ್ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.