ADVERTISEMENT

ರಾಜಕೀಯ ಭವಿಷ್ಯ ವರಿಷ್ಠರ ಕೈಯಲ್ಲಿ- ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 19:30 IST
Last Updated 21 ಮಾರ್ಚ್ 2012, 19:30 IST

ನವದೆಹಲಿ: `ನನ್ನ ರಾಜಕೀಯ ಭವಿಷ್ಯ ಕುರಿತು ಬಿಜೆಪಿ ವರಿಷ್ಠರು ತೀರ್ಮಾನಿಸಲಿದ್ದಾರೆ. ಆದರೆ, ಒಂದಂಶದ ಬೇಡಿಕೆ ಈಡೇರಿಕೆಗೆ ಕಾಲ ಮಿತಿ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಲು ಬುಧವಾರ ರಾತ್ರಿ ದೆಹಲಿಗೆ ಬಂದಿಳಿದಿರುವ ಯಡಿಯೂರಪ್ಪ, `ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅಡ್ಡಿಪಡಿಸುತ್ತಿಲ್ಲ. ಅವರ ಜತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅಡ್ವಾಣಿ ಪಕ್ಷದ ಅತೀ ದೊಡ್ಡ ನಾಯಕರು. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವೆ~ ಎಂದು ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಸೋಲಿಗೆ ಬಿಜೆಪಿ ಬಿಕ್ಕಟ್ಟು ಕಾರಣವಲ್ಲ ಎಂದು ಸ್ಪಷ್ಟಪಡಿಸಿದರು. ದೆಹಲಿಯಲ್ಲಿ ಎಲ್ಲ ಪ್ರಮುಖರನ್ನು ಭೇಟಿ ಮಾಡುವುದಾಗಿ ಹೇಳಿದರು. ಸಚಿವರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಹಾಗೂ ಉಮೇಶ್ ಕತ್ತಿ ಯಡಿಯೂರಪ್ಪ ಜತೆ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.