ADVERTISEMENT

ರಾಜಾ ಜಾಮೀನಿಗೆ ಸಿಬಿಐ ವಿರೋಧ

​ಪ್ರಜಾವಾಣಿ ವಾರ್ತೆ
Published 11 ಮೇ 2012, 19:30 IST
Last Updated 11 ಮೇ 2012, 19:30 IST

ನವದೆಹಲಿ (ಪಿಟಿಐ):  2ಜಿ ತರಂಗಾಂತರ ಹಗರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ದೂರಸಂಪರ್ಕ ಸಚಿವ ಎ.ರಾಜಾ ಅವರು ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದೆ.

ರಾಜಾ ಹಾಗೂ ಇತರ ಸರ್ಕಾರಿ ಅಧಿಕಾರಿಗಳು ರೂ 200 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂಬ ಹೊಸ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಬೇಕಾಗಿರುವುದರಿಂದ, ಅವರಿಗೆ ಜಾಮೀನು ನೀಡಬಾರದು ಎಂದು ಸಿಬಿಐ ಪರ ನ್ಯಾಯವಾದಿ ಎ.ಕೆ.ಸಿಂಗ್ ತಿಳಿಸಿದರು. 

ಆದರೆ, 2ಜಿ ಹಗರಣದಲ್ಲಿ ಇತರ ಆರೋಪಿಗಳಿಗೆ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ, ರಾಜಾ ಅವರಿಗೂ ಜಾಮೀನು ನೀಡಬೇಕೆಂದು ರಾಜಾ ಪರ ವಕೀಲರು ಕೋರಿದರು. ನ್ಯಾಯಾಲಯ ತೀರ್ಪನ್ನು ಮೇ 15ಕ್ಕೆ ಕಾಯ್ದಿರಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.