
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಜನ ಆರೋಪಿಗಳನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾ. 26ಕ್ಕೆ ಮುಂದೂಡಿದೆ.
ತಮಿಳುನಾಡಿನ ವಾದಕ್ಕೆ ಪ್ರತ್ಯುತ್ತರ ಸಲ್ಲಿಸಲು ತನಗೆ ಮತ್ತಷ್ಟು ಕಾಲಾವಕಾಶ ಬೇಕು ಎಂದು ಕೇಂದ್ರ ತಿಳಿಸಿದ್ದು, ಅಂತಿಮ ವಿಚಾರಣೆ ಮಾ. 26ಕ್ಕೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠ ತಿಳಿಸಿತು.
ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರೋಪಿಗಳನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ತೀರ್ಮಾನಕ್ಕೆ ತಡೆಯೊಡ್ಡಿ ಈ ಹಿಂದೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.