ADVERTISEMENT

ರಾಜೆ ಸೇರಿ ಹಲವರ ಬಂಧನ

​ಪ್ರಜಾವಾಣಿ ವಾರ್ತೆ
Published 8 ಜೂನ್ 2011, 19:30 IST
Last Updated 8 ಜೂನ್ 2011, 19:30 IST

ಜೈಪುರ (ಪಿಟಿಐ):  ಕಪ್ಪುಹಣಕ್ಕೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿ ರಾಜಸ್ತಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ನೇತೃತ್ವದಲ್ಲಿ ವೆುರವಣಿಗೆ ನಡೆಸುತ್ತಿದ್ದ ಹಲವರನ್ನು ಬುಧವಾರ ಬಂಧಿಸಲಾಗಿದೆ.

ಸುಮಾರು 300 ಕಾರ್ಯಕರ್ತರು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಪಕ್ಷದ ಕಚೇರಿಯಿಂದ ರಾಜಭವನಕ್ಕೆ ತೆರಳುತ್ತಿದ್ದರು. ಮಾರ್ಗ ಮಧ್ಯ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದುಕೊಂಡರು.

ಈ ಪ್ರದೇಶದಲ್ಲಿ ಮೆರವಣಿಗೆ ನಡೆಸಲು ಅನುಮತಿ ಇರಲಿಲ್ಲ. ಬಳಿಕ ರಾಜ್ಯಪಾಲರ ಭೇಟಿಗೆ ನಿಯೋಗವೊಂದನ್ನು ಕಳುಹಿಸುವಂತೆ ಕೋರಲಾಯಿತು. ಆದರೆ ಬಿಜೆಪಿಯ ಮುಖಂಡರು ಈ ಸಲಹೆಯನ್ನು ಒಪ್ಪಲಿಲ್ಲ ಎಂದು ಜೈಪುರದ ಪೊಲೀಸ್ ವರಿಷ್ಠಾಧಿಕಾರಿ ಜೋಸ್ ಮೋಹನ್ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.