ADVERTISEMENT

ರಾಜ್ಯಕ್ಕೆ ಇನ್ನೂ 3 ನವೋದಯ ವಿದ್ಯಾಲಯ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2016, 19:49 IST
Last Updated 6 ಮಾರ್ಚ್ 2016, 19:49 IST

ನವದೆಹಲಿ: ಕೇಂದ್ರ ಸರ್ಕಾರವು ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯಲು ರಾಜ್ಯದ ಕಲಬುರ್ಗಿ, ರಾಮನಗರ ಮತ್ತು ಕೋಲಾರ ಜಿಲ್ಲೆಗಳನ್ನು ಆಯ್ಕೆ ಮಾಡಿದೆ. ನವೋದಯ ವಿದ್ಯಾಲಯಗಳು ಇರದ ಜಿಲ್ಲೆಗಳಲ್ಲಿ ಮುಂದಿನ ಎರಡು ವರ್ಷಗಳಲ್ಲಿ 62 ಹೊಸ ವಿದ್ಯಾಲಯ ಗಳನ್ನು ಆರಂಭಿಸಲಾಗುತ್ತದೆ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ  ಬಜೆಟ್ ಭಾಷಣದಲ್ಲಿ ತಿಳಿಸಿದ್ದರು. ಅದರ ಪ್ರಕಾರ ರಾಜ್ಯದ ಮೂರು ಜಿಲ್ಲೆಗಳನ್ನು ನವೋದಯ ವಿದ್ಯಾಲಯ ತೆರೆಯಲು ಆಯ್ಕೆ ಮಾಡಲಾಗಿದೆ.

ಈ ಮೂರು ಜಿಲ್ಲೆಗಳಲ್ಲಿ ಶಾಲೆಗಳನ್ನು ಸ್ಥಾಪಿಸಲು ಅಗತ್ಯವಾದ ಭೂಮಿಯನ್ನು ಕರ್ನಾಟಕ ಸರ್ಕಾರ ಸ್ವಾಧೀನ ಪಡಿಸಿಕೊಂಡು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ಪ್ರೌಢಶಾಲಾ ವಿಭಾಗದ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ‘ಪ್ರಜಾವಾಣಿ’ಗೆ ತಿಳಿಸಿದರು. ಈ ಬಗ್ಗೆ ರಾಜ್ಯಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.