
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಪ್ರಸಕ್ತ ಬಜೆಟ್‌ನಲ್ಲಿ ರಾಜ್ಯಕ್ಕೆ ಜೇಟ್ಲಿ ಕೊಡುಗೆ ನಿರಾಶದಾಯಕವಾಗಿದ್ದರೂ ಇಲ್ಲಿನ ಕೈಗಾರಿಕಾ ವಲಯಕ್ಕೆ ಉತ್ತೇಜನ ನೀಡಲಾಗಿದೆ.
ಬೆಂಗಳೂರು –ಮುಂಬೈ ಕೈಗಾರಿಕಾ ಕಾರಿಡಾರ್ ವಲಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.
ಚೆನ್ನೈ ಮತ್ತು ಬೆಂಗಳೂರು ಕೈಗಾರಿಕಾ ವಲಯವನ್ನು ತುಮಕೂರು ಜಿಲ್ಲೆಯವರೆಗೂ ವಿಸ್ತರಿಸಲಾಗಿದೆ.
ಬೆಂಗಳೂರಿನಲ್ಲಿ ಜೈವಿಕ ತಂತ್ರಜ್ಞಾನ ವಲಯ, ಮೈಸೂರಿನಲ್ಲಿ ಜವಳಿ ಕ್ಲಸ್ಟರ್ ಸ್ಥಾಪನೆ, ತುಮಕೂರಿನಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಆರಂಭಿಸಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.