
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಹದಿನಾರನೇ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ರಾಜ್ಯದ 28 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಮಾರ್ಚ್19ರಂದು ಅಧಿಕೃತವಾಗಿ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 26 ಕೊನೆಯ ದಿನ. ಮಾರ್ಚ್ 27 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಮಾರ್ಚ್ 29 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.