ADVERTISEMENT

ರಾಜ್ಯದಲ್ಲಿ ಗೋಮಾಂಸ ನಿಷೇಧವಿಲ್ಲ ಎಂದ ಗೋವಾ ಸಚಿವ

ಏಜೆನ್ಸೀಸ್
Published 10 ಜುಲೈ 2017, 13:15 IST
Last Updated 10 ಜುಲೈ 2017, 13:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲ್ಕತ್ತ: ಗೋವಾದಲ್ಲಿ ಪ್ರವಾಸಿಗರು ತಮ್ಮಿಷ್ಟದ ಆಹಾರ ಸೇವಿಸಬಹುದು. ರಾಜ್ಯದಲ್ಲಿ ಗೋಮಾಂಸ ನಿಷೇಧಿಸಿಲ್ಲ ಎಂದು ಬಿಜೆಪಿ ಆಡಳಿತವಿರುವ ಗೋವಾದ ಪ್ರವಾಸೋದ್ಯಮ ಸಚಿವ ಮನೋಹರ್ ಅಜ್‌ಗಾವೊಂಕರ್ ತಿಳಿಸಿದ್ದಾರೆ.

ಕೊಲ್ಕತ್ತದಲ್ಲಿ ನಡೆದ ಪ್ರವಾಸೋದ್ಯಮ ಉತ್ಸವದಲ್ಲಿ ಮಾತನಾಡಿದ ಅವರು, ‘ಜಾನುವಾರು ಮಾರಾಟದ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ನಿರ್ಬಂಧ ಗೋವಾಕ್ಕೆ ಅನ್ವಯವಾಗುವುದಿಲ್ಲ. ಅಲ್ಲದೆ, ಕೇಂದ್ರದ ನಿಯಮದಿಂದ ರಾಜ್ಯದ ಪ್ರವಾಸೋದ್ಯಮದ ಮೇಲೆ ಯಾವುದೇ ಪರಿಣಾಮವಾಗದು ಎಂದು ಹೇಳಿದ್ದಾರೆ.

‘ಗೋವಾದಲ್ಲಿ ಹಿಂದುಗಳು, ಮುಸ್ಲಿಮರು, ಕ್ಯಾಥೋಲಿಕರು ಜತೆಯಾಗಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲಿ ಕೋಮು ಸಾಮರಸ್ಯ ಇದೆ’ ಎಂದು ಅವರು ಹೇಳಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನುಷ್ಠಾನದಿಂದಲೂ ರಾಜ್ಯದ ಪ್ರವಾಸೋದ್ಯಮಕ್ಕೆ ತೊಂದರೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.