
ಪ್ರಜಾವಾಣಿ ವಾರ್ತೆಕೋಲ್ಕತ್ತ(ಐಎಎನ್‌ಎಸ್): ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡದಿರಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಭಟ್ಟಾಚಾರ್ಯ ಮಂಗಳವಾರ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ತೃಣಮೂಲ ಪಕ್ಷ 185 ಸ್ಥಾನ ಹೊಂದಿದ್ದು ರಾಜ್ಯಸಭೆಗೆ ತನ್ನ ಮೂವರು ಸದಸ್ಯರನ್ನು ಕಳುಹಿಸಲು ಅದು ಸಶಕ್ತವಾಗಿದೆ. ಹೀಗಾಗಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸದಿರಲು ತೃಣಮೂಲ ಪಕ್ಷ ನಿರ್ಧರಿಸಿದ್ದು, ಮುಂದಿನ ಸಂಭಾವ್ಯತೆ ಬಗ್ಗೆ ತಿಳಿದಿಲ್ಲ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.
ರಾಜ್ಯಸಭೆಗೆ ಕಾಂಗ್ರೆಸ್‌ನ ಅಭ್ಯರ್ಥಿಗಳ ಹೆಸರನ್ನು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹಾಗೂ ಪ್ರಧಾನ ಕಾರ್ಯದರ್ಶಿ ಶಕೀಲ್ ಅಹಮದ್ ಮುಂದಿಟ್ಟಿರುವುದಾಗಿ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.