ADVERTISEMENT

ರಾಮಸೇತು: ಕ್ರಮಕ್ಕೆ ಕೇಂದ್ರ ನಕಾರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2012, 19:30 IST
Last Updated 19 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಪೌರಾಣಿಕ ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ನಿರಾಕರಿಸಿರುವ ಕೇಂದ್ರ ಸರ್ಕಾರ, ಈ ಕುರಿತು ಸುಪ್ರೀಂಕೋರ್ಟ್ ನಿರ್ಧಾರ ತೆಗೆದುಕೊಳ್ಳಲಿ ಎಂದು ಹೇಳಿದೆ.

ರಾಮಸೇತುಗೆ ಸಂಬಂಧಿಸಿದಂತೆ ಸೂಕ್ತ ಸಮಾಲೋಚನೆ ಕೈಗೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ನ್ಯಾಯಮೂರ್ತಿಗಳಾದ ಎಚ್.ಎಲ್.ದತ್ತು ಹಾಗೂ ಅನಿಲ್ ಆರ್. ದವೆ ನೇತೃತ್ವದ ಪೀಠದ ಮುಂದೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹರೇನ್ ರಾವಲ್ ತಿಳಿಸಿದರು.

2008ರಲ್ಲಿ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಿಳಿಸಿರುವಂತೆ ಸರ್ಕಾರ ಎಲ್ಲ ಧರ್ಮಗಳನ್ನೂ ಗೌರವಿಸುತ್ತದೆ. ಆದರೆ ಧರ್ಮಗಳ ನಂಬಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಸರ್ಕಾರವನ್ನು ಎಳೆದು ತರಬಾರದು ಎಂದು ಮನವಿ ಮಾಡಲಾಗಿತ್ತು ಎಂದರು.

ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಬೇಕೆಂದು ಕೋರಿ ಜನತಾ ಪಕ್ಷದ ಮುಖ್ಯಸ್ಥ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಈ ವಿಷಯ ತಿಳಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.