ನೈನಿತಾಲ್ (ಪಿಟಿಐ): ಪಾಸ್‌ಪೋರ್ಟ್‌ಗಾಗಿ ನಕಲಿ ಶೈಕ್ಷಣಿಕ ದಾಖಲೆ ನೀಡಿ ಬಂಧನಕ್ಕೊಳಗಾಗಿದ್ದ ಬಾಬಾ ರಾಮ್‌ದೇವ್ ಆಪ್ತ ಬಾಲಕೃಷ್ಣ ಅವರಿಗೆ ಉತ್ತರಾಖಂಡ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಾಧೀಶ ತರುಣ್ ಅಗರ್‌ವಾಲ್ ಅವರು ಬಾಲಕೃಷ್ಣ ಅವರಿಗೆ ಜಾಮೀನು ನೀಡಿದ್ದಾರೆ. ಜೊತೆಗೆ ರೂ 10 ಲಕ್ಷ ಮೌಲ್ಯದ ಇಬ್ಬರ ಖಾತರಿಯನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಆದೇಶಿಸಿದೆ.
ಕೋರ್ಟ್‌ಗೆ ಹಾಜರಾಗುವಲ್ಲಿ ವಿಫಲರಾದ ಅವರ ವಿರುದ್ಧ ಸಿಬಿಐ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಜುಲೈ 10ರಂದು ಬಾಲಕೃಷ್ಣ ವಿರುದ್ಧ ನ್ಯಾಯಾಲಯದಲ್ಲಿ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.
ಹರಿದ್ವಾರದಲ್ಲಿ ಬಂಧನಕ್ಕೆ ಒಳಗಾಗುವ ಮುನ್ನ ಜುಲೈ 20ರಂದು ಜಾಮೀನಿಗಾಗಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿ ತಿರಸ್ಕರಿಸಿ, 9 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಬಾಲಕೃಷ್ಣ, ಡೆಹ್ರಾಡೂನ್ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲೂ ಅರ್ಜಿ ವಜಾಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.