ADVERTISEMENT

ರಾಮ್‌ಲೀಲಾ: ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 19:30 IST
Last Updated 18 ಡಿಸೆಂಬರ್ 2013, 19:30 IST

ಮುಂಬೈ (ಪಿಟಿಐ): ಸಂಜಯ್‌ ಲೀಲಾ ಬನ್ಸಾಲಿ ನಿರ್ಮಾಣದ ‘ಗೋಲಿಯೊಂಕಿ ರಾಸ್‌ಲೀಲಾ ರಾಮ್‌ಲೀಲಾ’ ಸಿನಿಮಾಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕೃತ ಮಂಡಳಿ ನೀಡಿದ್ದ ಯು/ಎ ಪ್ರಮಾಣ ಪತ್ರವನ್ನು ಪುನರ್‌ ಪರಿಶೀಲಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಾಮ್‌ಲೀಲಾ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವ ಮೊದಲು ‘ಚಲನಚಿತ್ರ ದರ್ಶಕ ಕಾಯ್ದೆ’ಯ ಮಾರ್ಗಸೂಚಿಗಳನ್ನು ಅನುಸರಿಸ­ಲಾಗಿದೆಯೇ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುವಂತೆ ನ್ಯಾಯಾಧೀಶರಾದ ಎಮ್‌ ಕಾನಡೆ, ಎಮ್‌.ಎಸ್‌ ಸೋನಕ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠ ಕೇಂದ್ರ ಚಲನಚಿತ್ರ ಪ್ರಮಾಣೀಕೃತ ಮಂಡಳಿಗೆ  ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.