ADVERTISEMENT

ರಾಷ್ಟ್ರಪತಿ ಚುನಾವಣೆ: ಜೂನ್ ಮಧ್ಯ ಅಧಿಸೂಚನೆ ?

​ಪ್ರಜಾವಾಣಿ ವಾರ್ತೆ
Published 29 ಮೇ 2012, 9:50 IST
Last Updated 29 ಮೇ 2012, 9:50 IST
ರಾಷ್ಟ್ರಪತಿ ಚುನಾವಣೆ: ಜೂನ್ ಮಧ್ಯ ಅಧಿಸೂಚನೆ ?
ರಾಷ್ಟ್ರಪತಿ ಚುನಾವಣೆ: ಜೂನ್ ಮಧ್ಯ ಅಧಿಸೂಚನೆ ?   

ನವದೆಹಲಿ (ಪಿಟಿಐ): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಜೂನ್ ಮಧ್ಯದಲ್ಲಿ ಅಧಿಸೂಚನೆ ಹೊರಡಿಸುವ ಮೂಲಕ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಪ್ರತಿಭಾ ಪಾಟೀಲ ಅವರ ಅಧಿಕಾರಾವಧಿಯು ಜುಲೈ 24ರಂದು ಕೊನೆಗೊಳ್ಳಲಿದೆ. ಈ ನಿಟ್ಟಿನಲ್ಲಿ ಜೂನ್‌ನಲ್ಲಿ ಆಯೋಗವು ಅಧಿಸೂಚನೆ ಹೊರಡಿಸಲಿದೆ ಎಂದು ಹೇಳಲಾಗಿದೆ.
 
ಕಳೆದ ರಾಷ್ಟ್ರಪತಿ ಚುನಾವಣೆಯಲ್ಲಿ ಆಯೋಗವು ಬಹಳ ಮುಂಚಿತವಾಗಿ ಅಂದರೆ ಜೂನ್ 13ರಂದು ಅಧಿಸೂಚನೆ ಹೊರಡಿಸಿತ್ತು ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ 41 ಕಾರ್ಯಗಳ ಪರಿಶೀಲನಾ ಪಟ್ಟಿಯನ್ನು ತಯಾರಿಸುವ ಕೆಲಸ ಈಗಾಗಲೇ ಆರಂಭವಾಗಿದೆ ಎಂದು ಹೇಳಿದರು.

ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಗಳು ದಿನೇ ದಿನೇ ಹೆಚ್ಚುತ್ತಿದ್ದು, ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳ ಹಲವು ಧುರಿಣರ ಹೆಸರುಗಳು ಈಗಾಗಲೇ ಮುಂಚೂಣಿಯಲ್ಲಿದ್ದು, ಯುಪಿಎ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತೀವ್ರ ಕಸರತ್ತು ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.