ಕೋಲ್ಕತ್ತ (ಪಿಟಿಐ): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಕಾರ್ಯತಂತ್ರ ಚರ್ಚಿಸಲು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರೊಂದಿಗೆ ತಾವು ಸಕಾರಾತ್ಮಕ ಮಾತುಕತೆ ನಡೆಸಿದ್ದಾಗಿ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕಿರಣ್‌ಮಯ್ ನಂದಾ ಗುರುವಾರ ತಿಳಿಸಿದ್ದಾರೆ.
`ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಪ್ರಾದೇಶಿಕ ಪಕ್ಷಗಳ ಜತೆ ಮಾತುಕತೆ ನಡೆಸುವ ನಿಮ್ಮ ಮನವಿಗೆ ಮಮತಾ ಒಪ್ಪುವರೆ~ ಎಂಬ ಪ್ರಶ್ನೆಗೆ ನಂದಾ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
`ಚುನಾವಣೆಯಲ್ಲಿ ನಮ್ಮ ಪಾತ್ರ ಏನು ಎನ್ನುವುದನ್ನು ನಾವು ಚರ್ಚಿಸಿ ನಿರ್ಧರಿಸುತ್ತೇವೆ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಉದ್ದೇಶಿತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ ಸ್ಥಾಪನೆ (ಎನ್‌ಸಿಟಿಸಿ) ಸೇರಿದಂತೆ ಹಲವಾರು ವಿಷಯಗಳಲ್ಲಿ ತಮ್ಮ ಪಕ್ಷವು ತೃಣಮೂಲ ಕಾಂಗ್ರೆಸ್ ಜತೆ ಒಪ್ಪಿಗೆ ನೀಡಿದೆ ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.