ನವದೆಹಲಿ (ಪಿಟಿಐ): ರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿ ಬಗ್ಗೆ ಚರ್ಚಿಸಲು ಡಿಎಂಕೆ ಮುಖಂಡರರಾದ ಟಿ. ಆರ್. ಬಾಲು ಮತ್ತು ಎಂ.ಕೆ. ಸ್ಟಾಲಿನ್ ಅವರು ಗುರುವಾರ ಇಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.
ಬಾಲು ಮತ್ತು ಸ್ಟಾಲಿನ್ ಅವರು ಸಿಂಗ್ ಅವರನ್ನು ಸೌತ್ ಬ್ಲಾಕ್‌ನಲ್ಲಿ ಭೇಟಿ ಮಾಡಿ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಭೇಟಿ ಬಳಿಕ ಈ ಮುಖಂಡರು ಸೋನಿಯಾ ಅವರನ್ನು ಭೇಟಿಯಾಗಿ ರಾಷ್ಟ್ರಪತಿ ಸ್ಥಾನಕ್ಕೆ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಸಂಭಾವ್ಯ ಸ್ಪರ್ಧೆ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ರಕ್ಷಣಾ ಸಚಿವ ಎ.ಕೆ. ಆಂಟನಿ ಅವರೊಂದಿಗೆ ಚೆನ್ನೈನಲ್ಲಿ ನಡೆಸಿದ ಮಾತುಕತೆಗೆ ಪಕ್ಷ ಬದ್ಧವಾಗಿದೆ ಎಂದರು.
ಈ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮುಖರ್ಜಿ ಅವರನ್ನು ಆಯ್ಕೆ ಮಾಡಿದರೆ ತಮ್ಮ ಅಭ್ಯಂತರ ಇಲ್ಲ ಎಂದು ಕರುಣಾನಿಧಿ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.