ADVERTISEMENT

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ

ಪಿಟಿಐ
Published 28 ಜೂನ್ 2017, 7:10 IST
Last Updated 28 ಜೂನ್ 2017, 7:10 IST
ಮೀರಾ ಕುಮಾರ್  (ಸಾಂದರ್ಭಿಕ ಚಿತ್ರ)
ಮೀರಾ ಕುಮಾರ್ (ಸಾಂದರ್ಭಿಕ ಚಿತ್ರ)   

ನವದೆಹಲಿ: ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗಾಗಿ ಪ್ರತಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ಪ್ರತಿಪಕ್ಷ ನಾಯಕರ ಜತೆ ಸಂಸತ್‌ ಭವನದ ಒಂದನೇ ದ್ವಾರದ ಮೂಲಕ ತೆರಳಿದ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯವರ ಬಳಿ ತೆರಳಿ ನಾಮಪತ್ರ ಸಲ್ಲಿಸಿದರು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಬಿಎಸ್‌ಪಿ ನಾಯಕ ಸತೀಶ್ ಚಂದ್ರ ಮಿಶ್ರಾ, ಸಿಪಿಐ–ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ನಾಯಕ ಡಿ. ರಾಜ ಮತ್ತು ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮೀರಾ ಅವರ ಜತೆಗಿದ್ದರು. ಆದರೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಜರಿರಲಿಲ್ಲ.

ADVERTISEMENT

ಸಂಸತ್‌ ಭವನಕ್ಕೆ ತೆರಳುವ ಮುನ್ನ ಮೀರಾ ಕುಮಾರ್ ಅವರು ರಾಜ್ ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕ ಮತ್ತು ಸಮತಾ ಸ್ಥಳದಲ್ಲಿರುವ ಬಾಬು ಜಗಜೀವನ್ ರಾಮ್ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಎನ್‌ಡಿಎ ಅಭ್ಯರ್ಥಿ ರಾಮ ನಾಥ್ ಕೋವಿಂದ್ ವಿರುದ್ಧ ಪ್ರತಿಪಕ್ಷಗಳು ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.