ADVERTISEMENT

ರಾಷ್ಟ್ರಪತಿ ಚುನಾವಣೆ ಶೇ 99ರಷ್ಟು ಮತ ಚಲಾವಣೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2017, 16:16 IST
Last Updated 17 ಜುಲೈ 2017, 16:16 IST
ಸಂಸತ್‌ ಆವರಣದಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದ ಸಂಸದರು.
ಸಂಸತ್‌ ಆವರಣದಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದ ಸಂಸದರು.   

ನವದೆಹಲಿ: ದೇಶದ 14ನೇ ರಾಷ್ಟ್ರಪತಿ ಆಯ್ಕೆಯಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಶೇಕಡಾ 99ರಷ್ಟು ಮತ ಚಲಾವಣೆಯಾಗಿವೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 20ರಂದು ಮತ ಎಣಿಕೆ ನಡೆಯಲಿದೆ.

ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ ಹಾಗೂ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮೀರಾ ಕುಮಾರ್‌ ಕಣದಲ್ಲಿದ್ದರು.

ADVERTISEMENT

ಅರುಣಾಚಲ ಪ್ರದೇಶ, ಚತ್ತೀಸಗಡ, ಅಸ್ಸಾಂ, ಗುಜರಾತ್‌, ಬಿಹಾರ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ನಾಗಾಲೆಂಡ್‌, ಉತ್ತರಾಖಂಡ, ಪುದುಚೆರಿಗಳಲ್ಲಿ ಶೇ 100ರಷ್ಟು ಮತ ಚಲಾವಣೆ ಆಗಿವೆ.

ಸಂಸತ್‌ನಲ್ಲಿ ಶೇ 99ರಷ್ಟು ಮತ ಚಲಾವಣೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.