ADVERTISEMENT

ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೂನ್‌ 28 ಕೊನೇ ದಿನ

ಅಗತ್ಯಬಿದ್ದರೆ ಜುಲೈ 17ರಂದು ಚುನಾವಣೆ

ಏಜೆನ್ಸೀಸ್
Published 7 ಜೂನ್ 2017, 15:22 IST
Last Updated 7 ಜೂನ್ 2017, 15:22 IST
ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ
ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ   

ನವದೆಹಲಿ: ‘ಜುಲೈ 24ರಂದು ರಾಷ್ಟ್ರಪತಿಯಾಗಿ ಪ್ರಣವ್‌ ಮುಖರ್ಜಿ ಅವರ ಅವಧಿ ಕೊನೆಯಾಗಲಿದೆ. ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೂನ್‌ 28 ಕೊನೆಯ ದಿನ’ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಜೈದಿ, ‘ನಾಮಪತ್ರ ಹಿಂಪಡೆಯಲು ಜುಲೈ 1 ಕೊನೇ ದಿನ. ಅಗತ್ಯಬಿದ್ದರೆ ಜುಲೈ 17ರಂದು ಚುನಾವಣೆ ನಡೆಸಲಾಗುವುದು. ಚುನಾವಣೆ ನಡೆದರೆ ಜುಲೈ 20ರಂದು ಮತ ಎಣಿಕೆ ಕಾರ್ಯ ನಡೆಯಲಿದೆ’ ಎಂದು ಹೇಳಿದ್ದಾರೆ.

ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ನಡೆಸಬೇಕಾಗುತ್ತದೆ. ಒಬ್ಬರೇ ನಾಮಪತ್ರ ಸಲ್ಲಿಸಿದರೆ ಅವರೇ ಅವಿರೋಧವಾಗಿ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುತ್ತಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.