ADVERTISEMENT

ರಾಷ್ಟ್ರೀಯ: ಸಂಕ್ಷಿಪ್ತ ಸುದ್ದಿಗಳು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2013, 19:59 IST
Last Updated 25 ಸೆಪ್ಟೆಂಬರ್ 2013, 19:59 IST

ಬೆಂಕಿ ಅನಾಹುತ
ಮುಂಬೈ (ಪಿಟಿಐ):
ಕಲರ್ಸ್ ಚಾನಲ್‌ನ ಜನಪ್ರಿಯ ಟಿವಿ ಶೋ ‘ಕಾಮಿಡಿ ನೈಟ್ಸ್‌ ವಿತ್‌ ಕಪಿಲ್‌’ ಕಾರ್ಯಕ್ರಮದ ಸೆಟ್‌ಗೆ ಬೆಂಕಿ ಹತ್ತಿಕೊಂಡು ಉರಿದ ಘಟನೆ ಇಲ್ಲಿನ ಗುಡಗಾಂವ್ ಫಿಲ್ಮ್ ಸಿಟಿಯಲ್ಲಿ ಬುಧವಾರ ನಡೆದಿದೆ.

ಬೆಳಗ್ಗೆ 8 ಗಂಟೆಗೆ ಬೆಂಕಿ ಹತ್ತಿದ್ದರಿಂದ ಸೆಟ್‌ನಲ್ಲಿ ಯಾವುದೇ ಚಿತ್ರೀಕರಣ ನಡೆಯುತ್ತಿರಲಿಲ್ಲ ಹಾಗಾಗಿ ಪ್ರಾಣಹಾನಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.  

ತಕ್ಷಣ ಸ್ಥಳಕ್ಕೆ ಧಾವಿಸಿದ ಆ್ಯಂಬುಲೆನ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಹೆಚ್ಚಿನ ಅವಘಡವಾಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಾಚಾರ: ವಿಚಾರಣೆ ಮುಂದಕ್ಕೆ
ಮುಂಬೈ (ಪಿಟಿಐ):
ದೆಹಲಿ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್‌ 1 ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.