ನವದೆಹಲಿ (ಪಿಟಿಐ): ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ರೀಟಾ ಬಹುಗುಣ ಜೋಶಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಚುನಾವಣೆಯಲ್ಲಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾರೆ.
ಚುನಾವಣಾ ಫಲಿತಾಂಶದ ಬಳಿಕ ಇದೇ ಮೊದಲ ಬಾರಿ ಸೋನಿಯಾ ಅವರನ್ನು ಭೇಟಿ ಮಾಡಿದ್ದ ಜೋಶಿ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ನಿರ್ಧರಿಸಲಿದ್ದಾರೆ ಎಂದರು.
`ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿದ್ದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಫಲಿತಾಂಶ ಹೊರಬಿದ್ದ ದಿನವೇ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಅವರು, ಇದು ತಮಗೆ ಹಾಗೂ ಸೋನಿಯಾ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿ ನುಣುಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.