ನವದೆಹಲಿ: ರಾಜ್ಯದ ರೇಷ್ಮೆ ಬೆಳೆಗಾರರ ಸಂಕಷ್ಟದ ಕುರಿತು ಅಧ್ಯಯನ ನಡೆಸಿ ಶೀಘ್ರ ವರದಿ ನೀಡುವಂತೆ ಯೋಜನಾ ಆಯೋಗದ ಉಪಾಧ್ಯಕ್ಷ ಮೋಂಟೆಕ್ ಸಿಂಗ್ ಅಹ್ಲುವಾಲಿಯಾ ಆಯೋಗದ ಸದಸ್ಯ ಕೆ. ಕಸ್ತೂರಿ ರಂಗನ್ ಅವರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ರಾಜ್ಯದ ವಾರ್ಷಿಕ ಯೋಜನಾ ಗಾತ್ರದ ಕುರಿತು ಚರ್ಚೆ ನಡೆಸಲು ಬುಧವಾರ ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು.
ರೇಷ್ಮೆ ಬೆಳೆಗಾರರ ಸಮಸ್ಯೆ ಪ್ರಸ್ತಾಪಿಸಿದ ಸಿಎಂ, ಆಮದು ಕಚ್ಚಾ ರೇಷ್ಮೆ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದರ ಜತೆಯಲ್ಲಿ ರೇಷ್ಮೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದರು.
ಕಸ್ತೂರಿ ರಂಗನ್ ವರದಿಯ ನಂತರ ತಾವು ಹಣಕಾಸು ಸಚಿವರೊಂದಿಗೆ ಚರ್ಚೆ ಕೈಗೊಂಡು ಪರಿಹಾರ ಕ್ರಮ ಕೈಗೊಳ್ಳುವುದಾಗಿ ಅಹ್ಲುವಾಲಿಯಾ ಈ ಸಂದರ್ಭದಲ್ಲಿ ಸಿಎಂಗೆ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.