ನವದೆಹಲಿ (ಪಿಟಿಐ): ಮಹಾರಾಷ್ಟ್ರದಲ್ಲಿ ಕಬ್ಬು ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶ್ರುವಾಯು ಸಿಡಿಸಿ, ಹಲ್ಲೆ, ಗೋಲಿಬಾರ್ ನಡೆಸಿದ ಪೊಲೀಸರ ಕ್ರಮವನ್ನು ನಿವೃತ್ತ ಸೈನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಖಂಡಿಸಿದ್ದಾರೆ.
ಸರ್ಕಾರ ಮಧ್ಯ ಪ್ರವೇಶಿಸಿ ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ವಿ.ಕೆ. ಸಿಂಗ್ ಹಾಗೂ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆಯ ಸಂಚಾಲಕ ವಿ.ಎಂ. ಸಿಂಗ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.