ADVERTISEMENT

ರೈಲು ಪ್ರಯಾಣ ದರ ಏರಿಕೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2011, 19:30 IST
Last Updated 16 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈಲ್ವೆ ಇಲಾಖೆ ನಷ್ಟ ಸರಿದೂಗಿಸಲು ಉನ್ನತ ದರ್ಜೆ ರೈಲು ಪ್ರಯಾಣ ದರವನ್ನು ಹೆಚ್ಚಳ ಮಾಡುವ ಸಂಭವವಿದೆ. `ಪ್ರಯಾಣ ದರ ಏರಿಕೆಯು ಬಡವರ ಮೇಲೆ ಹೊರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ.
 
ಪರಿಷ್ಕೃತ ಪ್ರಯಾಣ ದರವು ಯಾವಾಗ ಬೇಕಿದ್ದರೂ ಜಾರಿಗೆ ಬರಬಹುದು~ ಎಂದು ರೈಲ್ವೆ ಹಣಕಾಸು ಆಯುಕ್ತ ಪೊಂಪ ಬಬ್ಬರ್ ತಿಳಿಸಿದ್ದಾರೆ. ಇತ್ತೀಚೆಗಷ್ಟೆ ಸರಕು ಸಾಗಣೆ ದರವನ್ನು ಶೇ 6ರಷ್ಟು ಹೆಚ್ಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.