ADVERTISEMENT

ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2013, 19:59 IST
Last Updated 19 ಜೂನ್ 2013, 19:59 IST

ನವದೆಹಲಿ (ಪಿಟಿಐ): ತಮ್ಮ ಇಲಾಖೆ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳೊಡನೆ ಚರ್ಚಿಸಿ ಆದ್ಯತೆಯ ಕಾರ್ಯಗಳನ್ನು ಕೈಗೆತ್ತಿಕೊಳ್ಳುವುದಾಗಿ ನೂತನ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಅವರು ಬುಧವಾರ ಇಲ್ಲಿನ ರೈಲ್ವೆ ಭವನದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅಧಿಕಾರಿಗಳ ಜೊತೆ ಚರ್ಚಿಸದೆ ಯಾವುದೇ ಆದ್ಯತೆಯ ವಿಷಯಗಳನ್ನು ತಿಳಿಸಲು ನಿರಾಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.