ADVERTISEMENT

ರ್‍ಯಾಗಿಂಗ್ ನಿಯಂತ್ರಣಕ್ಕೆ 24 ಗಂಟೆ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2012, 19:30 IST
Last Updated 16 ಜೂನ್ 2012, 19:30 IST

ಲಖನೌ(ಐಎಎನ್‌ಎಸ್): ಉತ್ತರ ಪ್ರದೇಶದ ಎಲ್ಲ ಎಂಜನಿಯರಿಂಗ್, ವೈದ್ಯಕೀಯ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜುಗಳಲ್ಲಿ  ರ್‍ಯಾಗಿಂಗ್ ಹಾವಳಿಯನ್ನು  ತಡೆಯಲು 24 ಗಂಟೆ ಕಾರ್ಯನಿರ್ವಹಿಸುವ  ಸಹಾಯವಾಣಿ ಪ್ರಾರಂಭವಾಗಲಿದೆ.

ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೂಚನೆಯ ಮೇರೆಗೆ ಸಹಾಯವಾಣಿ ಸ್ಥಾಪಿಸಲು ಕ್ರಿಯಾ ಯೋಜನೆಯನ್ನು ಸಿದ್ದವಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರ್‍ಯಾಗಿಂಗ್ ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿ ಅವರನ್ನು ಕಪ್ಪುಪಟ್ಟಿಗೆ ಸೇರಿಸುವ ಮೂಲಕ ಐದು ವರ್ಷಗಳ ಕಾಲ ಮತ್ತೆ ಅವರಿಗೆ ಪ್ರವೇಶ ನೀಡದಂತೆ ನೋಡಿಕೊಳ್ಳಲಾಗುತ್ತದೆ. ರ್‍ಯಾಗಿಂಗ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ  ಈ ಕ್ರಮ ಕೈಗೊಳ್ಳಲಾಗಿದೆ.ಈ 24X7ರ ಸಹಾಯವಾಣಿಯಲ್ಲಿ ದೂರುಗಳು ದಾಖಲಾಗುವ ವ್ಯವಸ್ಥೆಯೂ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.