ಶ್ರೀನಗರ (ಪಿಟಿಐ): ದಕ್ಷಿಣ ಕಾಶ್ಮೀರದ ಪುಲವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಲಷ್ಕರ್ ಎ ತೊಯ್ಬಾ (ಎಲ್ಇಟಿ) ಉಗ್ರರ ನಡುವೆ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಪುಲವಾಮಾ ಜಿಲ್ಲೆಯ ಅದೋರಾ ಗ್ರಾಮದಲ್ಲಿ ಉಗ್ರರೊಂದಿಗೆ ನಡೆದ ಈ ಚಕಮಕಿಯಲ್ಲಿ ಭದ್ರತಾ ಪಡೆ ಯೋಧರೊಂದಿಗೆ ಸ್ಥಳೀಯ ಪೊಲೀಸರು ಕೂಡ ಕೈಜೋಡಿಸಿದ್ದರು.
ರಾತ್ರಿಯಿಡೀ ನಡೆದ ಈ ಗುಂಡಿನ ಕಾಳಗದಲ್ಲಿ ಹತ್ಯೆಯಾದ ಇಬ್ಬರನ್ನು ಮುಜಾಫರ್ ಅಹ್ಮದ್ ಶೇಖ್ ಅಲಿಯಾಸ್ ಚೋಟು ಮತ್ತು ಆಶಿಕ್ ಹುಸೇನ್ ಶಹಾ ಎಂದು ಗುರುತಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.